ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
BIGG NEWS : ಕೊರೊನಾ ಬೆನ್ನಲ್ಲೇ ಪೋಷಕರಿಗೆ ಮತ್ತೊಂದು ಶಾಕ್ : ಶಾಲೆಗಳಲ್ಲಿ ಮಕ್ಕಳಿಗೆ ಕಾಣಿಸುತ್ತಿದೆ ಹೊಸ ರೋಗ!
ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬುವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಇಂದು ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಶಕ್ಕೆ ಪಡೆದಿದ್ದಾರೆ.
Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ