ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸರ್ವಪಕ್ಷ ಸಭೆ ನಡೆಸುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಇಂದು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಮಹಾಪಾಪಿ ಗಂಡ ತನ್ನ ಹೆಂಡ್ತಿಯನ್ನೇ ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಚಿತ್ರೀಕರಣ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸಂಬಂಧ ಚರ್ಚೆ ನಡೆಸುವ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಜೊತೆಗೂ ಮಾತನಾಡುತ್ತೇನೆ. ಸರ್ವಪಕ್ಷದ ಸಭೆ ಬೆಳವಣಿಗೆ ಆದ ಕೂಡಲೇ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
BIGG NEWS : `ಕರ್ನಾಟಕ-ಮಹಾರಾಷ್ಟ್ರ’ ಗಡಿ ವಿಚಾರದಲ್ಲಿ ರಾಜಿ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ