ಬೆಂಗಳೂರು : ಬಿಬಿಎಂಪಿ ಕಸದ ಲಾರಿಯ ಅಪಘಾತಕ್ಕೆ ನಾಗಕರಿಕರು ಬಲಿಯಾಗುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಬಿಬಿಎಂಪಿಕಸದ ಲಾರಿ ಬಲಿ ಪಡೆದುಕೊಂಡಿದೆ. ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
BIG NEWS: ದೇಶದ ಗಡಿ ದಾಟಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ವಾಪಸ್ ಕಳುಹಿಸಿದ ಪಾಕ್
ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾವಿನಕುಂಟೆ ಗ್ರಾಮದ ರಾಜು (30) ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.