ಬೆಂಗಳೂರು : ರಾಜಕೀಯ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
BREAKING NEWS : `ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಕೆಲಸವನ್ನು ನಂಬಿಕೊಂಡು ಇಲ್ಲಿಯವರೆಗೆ ನಾನು ಬಂದಿದ್ದೇನೆ. ಗ್ರಾಮಪಂಚಾಯಿತಿಯಿಂದ ಹಿಡಿದು ಬಳ್ಳಾರಿ ಜಿಲ್ಲೆಯನ್ನು ಬಿಜೆಪಿಯನ್ನಾಗಿ ಮಾಡಿರುವ ಕೀರ್ತಿ ಜನಾರ್ದನ ರೆಡ್ಡಿ ಮಾತ್ರ ಎಂದಿದ್ದಾರೆ.
2006 ರಲ್ಲಿ 20-20 ಸಮಿಶ್ರ ಸರ್ಕಾರದಲ್ಲಿ ಯಡಿಯೂರಪ್ಪ- ಕುಮಾರಸ್ವಾಮಿ ಇದ್ರು. ಅಧಿಕಾರದ ಹಂಚಿಕ ಆಧಾರದ ಮೇಲೆ ಸರ್ಕಾರ ರಚನೆ ಮಾಡಿದ್ದರು. ಈ ವೇಳೆ ಯಡಿಯೂರಪ್ಪ ನನ್ನನ್ನು ಕರೆದು ಬಿಜೆಪಿ ಪಕ್ಷವನ್ನು ಕಟ್ಟುವ ಸಲುವಾಗಿ ನನ್ನ ಜೊತೆಗೆ ಕೆಲಸ ಮಾಡುವಂತೆ ಕೇಳಿಕೊಂಡಿದ್ದರು. ಅದರಂತೆ ನಾನು ಕೆಲಸ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಲು ಬಂದಾಗ ನಿರಾಕರಿಸಿ ಶ್ರೀರಾಮುಲು ಅವರನ್ನು ಮಂತ್ರಿ ಮಾಡಲು ಹೇಳಿದ್ದೆ ಎಂದರು.
ಅಟಲ್ ಬಿಹಾರಿ ವಾಜಪೇಯಿ ಅಭಿಯಾನಿಯಾಗಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೆ. ಆದರೆ ಬಿಜೆಪಿಯಿಂದ ನನಗೆ ಅಮಾನತು ಮಾಡಿದ್ದು, ತೀವ್ರ ನೋವಾಗಿದೆ. ಹೀಗಾಗಿ ನಾನು ಇನ್ಮುಂದೆ ಬಿಜೆಪಿಯಲ್ಲಿ ಮುಂದುವರೆಯುವುದಿಲ್ಲ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ರಾಜಕೀಯಕ್ಕೆ ಪ್ರವೇಶ ಮಾಡುತ್ತೇನೆ ಎಂದು ಘೋಷಿಸಿಸದ್ದಾರೆ.
BIGG NEWS: 2022ನೇ ವರ್ಷ ಹಲವು ಸಾಧನೆಗಳಿಗೆ ಭಾರತ ಸಾಕ್ಷಿಯಾಗಿದೆ; ಮನ್ ಕೀ ಬಾತ್ನಲ್ಲಿ ಪ್ರಧಾನಿ ಮೋದಿ ಮಾತು