ಬೆಂಗಳೂರು : ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ (Prasanna B. Varale) ಅವರನ್ನು ಕರ್ನಾಟಕದ ಹೈಕೋರ್ಟ್ನ (High Court of Karnataka ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.
BIGG NEWS: ಬೆಂಗಳೂರಿನ ಸೋಮೇಶ್ವರದಲ್ಲಿ ತಲ್ವಾರ್ ಹಿಡಿದು ʼಮುಸ್ಲಿಂ ಮುಖಂಡರ ಡ್ಯಾನ್ಸ್ : 18 ಜನ ಅರೆಸ್ಟ್
ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು. ನ್ಯಾ. ವರಾಳೆ ಅವರು 1962 ಜೂನ್ 23ರಂದು ಜನಿಸಿದ್ದು, 1985ರ ಆಗಸ್ಟ್ 12 ರಂದು ವಕೀಲರಾಗಿ ಸೇವೆ ಆರಂಭಿಸಿದರು. ಬಳಿಕ 1990ರಿಂದ 1992ರವರೆಗೆ ಔರಂಗಾಬಾದ್ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ.