ನವದೆಹಲಿ : ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ ಟೂರ್ನಿಯನ್ನ ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ತಿಳಿಸಿದರು.
“ಏಷ್ಯಾ ಕಪ್ ಯುಎಇಯಲ್ಲಿ ನಡೆಯಲಿದೆ. ಯಾಕಂದ್ರೆ, ಮಳೆಯಾಗದ ಏಕೈಕ ಸ್ಥಳ ಇದೊಂದೇ” ಎಂದು ಗಂಗೂಲಿ ಮಂಡಳಿಯ ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ದೇಶದಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದಾಗಿ ಮುಂಬರುವ ಏಷ್ಯಾಕಪ್ ಟಿ 20 ಪಂದ್ಯಾವಳಿಗೆ ಆತಿಥ್ಯ ವಹಿಸುವ ಸ್ಥಿತಿಯಲ್ಲಿ ಮಂಡಳಿ ಇರುವುದಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ (SLC) ಬುಧವಾರ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC)ಗೆ ಮಾಹಿತಿ ನೀಡಿತ್ತು.
ಲಂಕಾ ಪ್ರೀಮಿಯರ್ ಲೀಗ್ (LPL)ನ ಮೂರನೇ ಆವೃತ್ತಿಯನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಬಿಕ್ಕಟ್ಟಿನಿಂದಾಗಿ ಮುಂದೂಡಿದ ನಂತರ ಈ ಬೆಳವಣಿಗೆ ನಡೆದಿದೆ. ಅಂದ್ಹಾಗೆ, ಏಷ್ಯಾಕಪ್ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ಟಿ20 ಮಾದರಿಯಲ್ಲಿ ನಡೆಯಲಿದೆ.