ನವದೆಹಲಿ : ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರನಾಗಿ ಅಕ್ಷರ್ ಪಟೇಲ್ ಅವ್ರನ್ನ ಹೆಸರಿಸಿದೆ.

ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವ್ರು ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ಈ ಹಿಂದೆ ತಂಡದಲ್ಲಿ ಸ್ಟ್ಯಾಂಡ್‌ಬೈ ಎಂದು ಹೆಸರಿಸಲಾಗಿದ್ದ ಅವರ ಬದಲಿಗೆ ಅಕ್ಷರ್ ಪಟೇಲ್ ಶೀಘ್ರದಲ್ಲೇ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಏಷ್ಯಾಕಪ್‌ಗೆ ಭಾರತ ತಂಡ ಇಂತಿದೆ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಆವೇಶ್ ಖಾನ್

Share.
Exit mobile version