ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಸ್.ಕೆ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ನಂತರ ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಬಸವರಾಜನ್ ಗೆ ಜಾಮೀನು ನಿರಾಕರಿಸಿತ್ತು.ಇತ್ತೀಚೆಗೆ ಬಸವರಾಜನ್ ಪತ್ನಿ ಸೌಭಾಗ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾ ಆಗಿತ್ತು. .
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಎಸ್.ಕೆ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.ಮುರುಘಾ ಶ್ರೀ ವಿರುದ್ಧ ದೂರು ನೀಡಲು ಬಾಲಕಿಯರಿಗೆ ಪ್ರಚೋದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಬಸವರಾಜ್ ಅವರನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ನೀಡಿ ನ್ಯಾಯಮೂರ್ತಿ ಎಸ್, ರಾಚಯ್ಯ ಆದೇಶ ಹೊರಡಿಸಿದ್ದಾರೆ.