ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು, ಆದರೆ ನಾಳೆ ವಿಚಾರಣೆ ನಡೆಯುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ಬ್ಯುಸಿಯಾಗಿರುವುದರಿಂದ ನಾಳೆ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆಯೂ ಕೂಡ ಬೆಳಗಾವಿ ಗಡಿ ವಿವಾದದ ತೀರ್ಪು ಪ್ರಕಟವಾಗುವುದಿಲ್ಲ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ಇಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಸಭೆ ಬಳಿಕ ಮಾತನಾಡಿದ್ದ ಅಲೋಕ್ ಕುಮಾರ್, ಸುಪ್ರೀಂಕೋರ್ಟ್ ನಲ್ಲಿ ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಹೀಗಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್ಪೋಸ್ಟ್ ಮಾಡಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದರು.
ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್ಪಿ, ನಗರ ಪೊಲೀಸ್ ಆಯುಕ್ತ, ಡಿಸಿಪಿಗಳು, ಡಿವೈಎಸ್ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್ಪಿ, ಸಾಂಗ್ಲಿ ಎಸ್ಪಿ, ಸಿಂಧುದುರ್ಗ ಎಸ್ಪಿ, ಸಾವಂತವಾಡಿಯ ಡಿಎಸ್ಪಿಗಳು ಭಾಗವಹಿಸಿದ್ದರು.
ಕಟ್ಟಡ ಕಾರ್ಮಿಕರಿಗ ಗಮನಕ್ಕೆ: ಡಿ.1ರಿಂದ ‘ಬೆಂಗಳೂರು ಒನ್ ಕೇಂದ್ರ’ಗಳಲ್ಲಿ ‘ಬಿಎಂಟಿಸಿ ಸಹಾಯಹಸ್ತ ಪಾಸ್’ ವಿತರಣೆ
BIGG NEWS: ಬೆಂಗಳೂರಿನ ಎರಡು ಮೇಲ್ಸೇತುವೆಗಳ ಪಿಲ್ಲರ್ಗಳಲ್ಲಿ ಬಿರುಕು; ಬಿಬಿಎಂಪಿಗೆ ದೂರು ಸಲ್ಲಿಸಿದ ನಾಗರಿಕರು