ನವದೆಹಲಿ : ಟೀಂ ಇಂಡಿಯಾಗೆ ಭಾರಿ ಹಿನ್ನಡೆಯಾಗಿದ್ದು, ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ 2022ರ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಇದಕ್ಕೂ ಮುನ್ನ ಜಡೇಜಾ 2022ರ ಏಷ್ಯಾಕಪ್ ಟೂರ್ನಿಯಿಂದಲೂ ಹೊರಗುಳಿದಿದ್ದರು. ಅವರು ಪಾಕಿಸ್ತಾನದ ವಿರುದ್ಧ ಪ್ರಮುಖ ಪಾತ್ರ ವಹಿಸಿದರು. ಆದ್ರೆ, ಪಂದ್ಯದ ನಂತರ, ಅವರು ಗಾಯಗೊಂಡಿದ್ದಾರೆ ಮತ್ತು ಏಷ್ಯಾ ಕಪ್ನ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಬಂತು. ಜಡೇಜಾ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅವರು ಈಗ ಟಿ20 ವಿಶ್ವಕಪ್ ನಂತರವಷ್ಟೇ ಮೈದಾನಕ್ಕೆ ಮರಳಲು ಸಾಧ್ಯವಾಗುತ್ತದೆ.
ಮಾಧ್ಯಮ ವರದಿಗಳ ಪ್ರಕಾರ, ಜಡೇಜಾ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ನಂತರವೇ ಮೈದಾನಕ್ಕೆ ಮರಳಲು ಸಾಧ್ಯವಾಗುತ್ತದೆ. ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ʼಗಾಗಿ ಭಾರತ ತಂಡವು ಈಗಾಗಲೇ ತಯಾರಿ ನಡೆಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಜಡೇಜಾ ಅವರಂತಹ ಆಟಗಾರನ ಗಾಯವು ತಂಡಕ್ಕೆ ನಷ್ಟವಾಗಿದೆ.
ಅಂದ್ಹಾಗೆ. ಗುಂಪು ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 5 ವಿಕೆಟ್ʼಗಳಿಂದ ಸೋಲಿಸಿತು. ಈ ಪಂದ್ಯವು ತುಂಬಾ ಸ್ಪರ್ಧಾತ್ಮಕವಾಗಿತ್ತು ಮತ್ತು ಕೊನೆಯ ಓವರ್ʼವರೆಗೂ ಮುಂದುವರಿಯಿತು. ಈ ಪಂದ್ಯದಲ್ಲಿ, ಜಡೇಜಾ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಅರ್ಧ ಶತಕದ ಜೊತೆಯಾಟವನ್ನ ಆಡಿದರು ಮತ್ತು ಭಾರತವನ್ನು ಗೆಲುವಿನತ್ತ ಕೊಂಡೊಯ್ದರು. ಜಡೇಜಾ 29 ಎಸೆತಗಳಲ್ಲಿ 35 ರನ್ ಗಳಿಸಿದರು. ಈ ಸಮಯದಲ್ಲಿ ಅವರು 2 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದ್ದರು. ಪಾಂಡ್ಯ 17 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರು. ಅವರು 4 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದ್ದರು.