ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್ಗೆ ಕರೆ ನೀಡಲಾಗಿದೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : `ರೈತ ಶಕ್ತಿ ಯೋಜನೆ’ಯಡಿ `ಡಿಸೇಲ್ ಸಹಾಯಧನ
ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್ಗೆ ವಿಎಚ್ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.