ಬಾಗಲಕೋಟೆ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಾಗಲಕೋಟೆ ಜಿಲ್ಲಾ ಬಿಜೆಪಿಯಲ್ಲಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಜಮಖಂಡಿ ಬಿಜೆಪಿ ನಗರ ಮಂಡಲ, ಒಬಿಸಿ ಮೋರ್ಚಾ, ಮಹಿಳೆ ಮತ್ತು ಎಸ್ ಸಿ ಮೋರ್ಚಾ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಜಮಖಂಡಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ ಶಿರಗನ್ನವರ್, ಜಮಖಂಡಿ ನಗರ ಮಂಡಲ ಕಾರ್ಯದರ್ಶಿ ಶಂಕರ್ ಕಾಳೆ, ಜಮಖಂಡಿ ಒಬಿಸಿ ಮೋರ್ಚಾ ಅಧ್ಯಕ್ಷ ಗಣಾಚಾರಿ, ಒಬಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲಾಗಿದೆ.
ಇನ್ನು ಕೊಪ್ಪಳ ಜಿಲ್ಲಾ ಬಿಜೆಪಿಯಲ್ಲೂ ರಾಜೀನಾಮೆ ಪರ್ವ ಮುಂದುವರೆದಿದ್ದು, ಗ್ರಾಮೀಣಾ ಮಂಡಲ ಕೋಷ್ಟಾಧ್ಯಕ್ಷ ಸ್ಥಾನಕ್ಕೆ ಅಣ್ಣಯ್ಯ ಹಿಟ್ನಾಳ್ ರಾಜೀನಾಮೆ ನೀಡಿದ್ದಾರೆ. ಒಲೈಕೆ ರಾಜಕಾರಣ ಮಾಡಬೇಡಿ. ಇನ್ನೂ ಅನೇಕ ಕಾರ್ಯಕರ್ತರು ರಾಜೀನಾಮೆ ನೀಡಲಿದ್ದಾರೆ. ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಆರ್. ಪಾಲಯ್ಯ, ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಚಳ್ಳಕರೆ ತಾಲೂಕು ಯುವ ಮೋರ್ಚ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ರಾಜೀನಾಮೆ ನೀಡಿದ್ದಾರೆ.
BIGG NEWS : ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?