ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIGG NEWS: ಸಚಿವ ಉಮೇಶ ಕತ್ತಿ ವಿಧಿವಶ; ಬೆಳಗಾವಿ ಜಿಲ್ಲೆಯಾದ್ಯಂತ ನೀರವ ಮೌನ
ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೀಗ ಬೆಂಗಳೂರಿನ ಹೆಚ್ ಎಎಲ್ ಗೆ ಹೈದರಾಬಾದ್ ನಿಂದ ವಿಶೇಷ ವಿಮಾನ ಆಗಮಿಸಿದ್ದು, ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿಗೆಂದು ಬಂದು ವಾಪಸ್ ಹೋದ ಬಾಲಿವುಡ್ ದಂಪತಿ… ಕಾರಣ ಇಲ್ಲಿದೆ?
ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಯವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು, ಆತ್ಮೀಯ ವಲಯ, ಅಭಿಮಾನಿಗಳು, ಹಿತೈಶಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ.