ಪಾಟ್ನಾ : ಬಿಹಾರದ ರಾಜಧಾನಿ ಪಾಟ್ನಾದ ಸಿವಿಲ್ ನ್ಯಾಯಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಹಠಾತ್ ಸ್ಫೋಟ ಸಂಭವಿಸಿದೆ. ಸ್ಫೋಟದ ಸದ್ದಿನಿಂದಾಗಿ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮತ್ತೊಂದೆಡೆ, ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಪ್ರಸ್ತುತ, ಸ್ಫೋಟದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ ಪಾಟ್ನಾದ ಹಾಸ್ಟೆಲ್‌ನಿಂದ ಕೆಲವು ದಿನಗಳ ಹಿಂದೆ ಬಾಂಬ್ ವಶಪಡಿಸಿಕೊಳ್ಳಲಾಗಿತ್ತು. ವಶಪಡಿಸಿಕೊಂಡ ಬಾಂಬ್ʼನ್ನ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಅಲ್ಲಿ ಹಾಜರಿದ್ದ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ವಶಪಡಿಸಿಕೊಂಡ ಬಾಂಬ್ ಬಗ್ಗೆ ಕಡಮಕುವಾನ್ ಪೊಲೀಸ್ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಫೋಟದ ತೀವ್ರತೆ ಕಡಿಮೆಯಾಗಿತ್ತು
ಸ್ಫೋಟಗೊಂಡ ಬಾಂಬ್‌ನ ತೀವ್ರತೆ ತೀರಾ ಕಡಿಮೆಯಿದ್ದು, ಹೆಚ್ಚಿನ ಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯ, ಸ್ಫೋಟದಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Share.
Exit mobile version