ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ರಾಜಾಜಿನಗರ ಎನ್ ಪಿ ಎಸ್ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೋಷಕರು, ಮಕ್ಕಳು, ಶಿಕ್ಷಕರು ಬೆಚ್ಚಿಬಿದ್ದಿದ್ದಾರೆ. ಈ ಹಿನ್ನೆಲೆ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನಂತರ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಕರೆದುಕೊಂಡು ಹೋಗಿದ್ದಾರೆ.
ಕೂಡಲೇ ಶಿಕ್ಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.ಜೊತೆಗೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಕೂಡ ಶಾಲೆಯತ್ತ ಧಾವಿಸಿ ತಪಾಸಣೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಜೆ.ಜಗದೀಶ್ ಪರ ವಕೀಲ ಹೇಳಿದ್ದೇನು..?