ದೊಡ್ಡಬಳ್ಳಾಪುರ : ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ತೆರಳುತ್ತಿದ್ದಾಗ ಕೆಳಗೆ ಬಿದ್ದು ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಎಸ್ಕೇಪ್ ಆಗಲು ಯತ್ನಿಸಿದ್ದು, ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಹಿನ್ನೆಲೆ ಬಿಬಿಎಂಪಿ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ಹೊರ ಹಾಕಿದ್ದಾರೆ.