ನವದೆಹಲಿ : ಭಾರತೀಯ ನಟ, ಚಲನಚಿತ್ರ ನಿರ್ಮಾಪಕ ಮತ್ತು ಮಾಜಿ ರಾಜಕಾರಣಿ, ತೆಲುಗು ಚಲನಚಿತ್ರೋದ್ಯಮದಲ್ಲಿ ಖ್ಯಾತಿ ಗಳಿಸಿದ ನಟ ಚಿರಂಜೀವಿ ಅವ್ರು ಭಾನುವಾರ ಗೋವಾದಲ್ಲಿ ನಡೆದ 53ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) 2022ರ “ಇಂಡಿಯಾ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್” ಗೌರವಕ್ಕೆ ಪಾತ್ರರಾಗಿದ್ದಾರೆ.
“ಭಾರತೀಯ ಚಲನಚಿತ್ರ ನಟ ಚಿರಂಜೀವಿ ಜೀ ಅವರು ಸುಮಾರು ನಾಲ್ಕು ದಶಕಗಳ ಕಾಲ ನಟರಾಗಿ, ನೃತ್ಯಗಾರ್ತರಾಗಿ ಮತ್ತು ನಿರ್ಮಾಪಕರಾಗಿ 150ಕ್ಕೂ ಹೆಚ್ಚು ಚಲನಚಿತ್ರಗಳನ್ನ ಮಾಡಿದ್ದಾರೆ. ಅವರು ತೆಲುಗು ಸಿನೆಮಾದಲ್ಲಿ ಅಪಾರ ಖ್ಯಾತಿ ಗಳಿಸಿದ್ದಾರೆ. ಅಮೋಘ ಪಾತ್ರಗಳು ಹೃದಯಗಳನ್ನ ಸ್ಪರ್ಶಿಸುತ್ತವೆ. ಅಭಿನಂದನೆಗಳು” ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಭಾನುವಾರ ಟ್ವೀಟ್ ಮಾಡಿದ್ದಾರೆ.
INDIAN FILM PERSONALITY @IFFIGoa
Sh Chiranjeevi Ji has had an illustrious career spanning almost four decades, w/ over 150 films as an actor, dancer & producer.
He is immensely popular in Telegu Cinema w/ incredible performances touching hearts!
Congratulations @KChiruTweets! pic.twitter.com/ZIk0PvhzHX
— Anurag Thakur (@ianuragthakur) November 20, 2022
ಅಂದ್ಹಾಗೆ, ನಟ ಚಿರಂಜೀವಿ ತಮ್ಮ ವೃತ್ತಿಜೀವನದಲ್ಲಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತೆಲುಗು, ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಚಿರಂಜೀವಿ ತಮ್ಮ ನಾಲ್ಕು ದಶಕಗಳ ಚಲನಚಿತ್ರ ವೃತ್ತಿಜೀವನದಲ್ಲಿ, ಆಂಧ್ರಪ್ರದೇಶ ರಾಜ್ಯದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿ, ರಘುಪತಿ ವೆಂಕಯ್ಯ ಪ್ರಶಸ್ತಿ, ಮೂರು ನಂದಿ ಪ್ರಶಸ್ತಿಗಳು ಮತ್ತು ಒಂಬತ್ತು ಫಿಲ್ಮ್ಫೇರ್ ಪ್ರಶಸ್ತಿಗಳನ್ನ ಪಡೆದಿದ್ದಾರೆ.
2006ರಲ್ಲಿ, ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನ ನೀಡಿ ಗೌರವಿಸಲಾಯಿತು. ಇನ್ನು ಆಂಧ್ರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಯಿತು. ಅವರು 2021ಮತ್ತು 2014ರವರೆಗೆ ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದರು.