ಹಾವೇರಿ : ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇವೆ. ಈಗಾಗಲೇ ಹಣಕಾಸು ಇಲಾಖೆ ಜೊತೆಗೆ ಮಾತುಕತೆ ನಡೆಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BREAKING NEWS : ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಳ : ಹೋಟೆಲ್ ಸಿಬ್ಬಂದಿಗಳಿಗೆ ಮಾಸ್ಕ್ ಬಳಕೆ ಕಡ್ಡಾಯ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇವೆ. ಹಣಕಾಸು ಇಲಾಖೆ ಜೊತೆಗೆ ಮಾತುಕತೆ ನಡೆಸಿದ್ದೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಲಿದ್ದೇವೆ. ಜನವರಿ ತಿಂಗಳಿನಿಂದಲೇ ಬಜೆಟ್ ಸಿದ್ಧತೆ ಶುರು ಮಾಡಲಿದ್ದೇವೆ ಎಂದು ತಿಳಸಿದ್ದಾರೆ.
BIGG NEWS: ಬೆಳ್ತಂಗಡಿಯಲ್ಲಿ ಶಾಲಾ ಬಸ್ & ಗೂಡ್ಸ್ ಆಟೋ ನಡುವೆ ಡಿಕ್ಕಿ : ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಇನ್ನು ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರವು ಅಗತ್ಯ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಮುಂಜಾಗ್ರತಾ ಕ್ರಮವಾಗಿ ಬೂಸ್ಟರ್ ಹಾಕಿಕೊಳ್ಳುವಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದರು. ಬಸ್, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಟೆಸ್ಟಿಂಗ್ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
BIGG NEWS: ಬೆಂಗಳೂರಿನಲ್ಲಿ ಕೊರೊನಾ ಫುಲ್ ಕಟ್ಟೆಚ್ಚರ…!; ಕೋವಿಡ್ ಜಾಗೃತಿಗೆ ಮುಂದಾದ ಮಾರ್ಷಲ್ ಗಳು