ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಜುಲೈ 24 ರಿಂದ 3 ದಿನ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗುವುದು. ಕೆ.ಎಸ್. ಈಶ್ವರಪ್ಪ ಸಂಪುಟ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ವರಿಷ್ಠರ ಜೊತೆಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು.