ಚಿತ್ರದುರ್ಗ : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಶೀಘ್ರವೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
BIGG NEWS : `ಪೇ ಸಿಎಂ ಪೋಸ್ಟರ್’ ಅಂಟಿಸಿದ ಪ್ರಕರಣ : ಕೆಪಿಸಿಸಿ ಸದಸ್ಯರಿಗೆ `ಸಿಸಿಬಿ’ಯಿಂದ 3 ನೇ ನೋಟಿಸ್ ಜಾರಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಶೀಘ್ರವೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆಗೆ ಚರ್ಚಿಸುತ್ತೇನೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮತ್ತೆ ಮಂತ್ರಿಗಿರಿ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗರಿ ತ್ವರಿತಗತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೆಡೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣ ಗೊಳಿಸಲಾಗುವುದು. ಈ ಯೊಜನೆ ಪೂರ್ಣಗೊಂಡರೆ ರಾಜ್ಯದಲ್ಲಿಯೇ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ ಎಂದು ತಿಳಿಸಿದ್ದಾರೆ.