ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

BIGG BREAKING NEWS: ಅಮೆರಿಕದ ನಟಿ ಅನ್ನಿ ಹೆಚೆ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಲಿದ್ದು, ಸಭೆಯಲ್ಲಿ ಮಳೆಯಿಂದಾದ ನಷ್ಟದ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ನೆರೆಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

BIGG NEWS : ತುಮಕೂರಿನಲ್ಲಿ ವರುಣನ ಆರ್ಭಟಕ್ಕೆ ʼ ಬಿದ್ದ ಕೆರೆಕೋಡಿʼ : ಭರ್ಜರಿ ಮೀನು ಹಿಡಿಯಲು ʼ ಗ್ರಾಮಸ್ಥರ ದುಸ್ಸಾಹಸ ʼʼ

Share.
Exit mobile version