ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳು ಮತ್ತು ರಾಜ್ಯ ಚುನಾವಣಾ ಆಯೋಗವು ಮತದಾರರ ದತ್ತಾಂಶಗಳ ಕಳ್ಳತನ, ವಂಚನೆ ಹಾಕುವಿಕೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಗುರುವಾರ ಆರೋಪಿಸಿದ್ದಾರೆ. ಇದೇ ವೇಳೆ ಸುರ್ಜೇವಾಲಾ, ಮತದಾರರಿಂದ ದತ್ತಾಂಶಗಳನ್ನು ಸಂಗ್ರಹಿಸಲು ಅಧಿಕಾರಿಗಳು ಚುನಾವಣಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ರಾಜ್ಯ ಸರ್ಕಾರದ ವಿರುದ್ದ ಕೇಳಿ ಬಂದಿದ್ದು, ಸಿಎಂ ಕೂಡಲೇ ರಾಜೀನಾಮೆಯನ್ನು ನೀಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಇಂದು ನಡೆದ ಪ್ರೆಸ್ಮೀಟ್ನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದರ ಸಂಪೂರ್ಣ ಹೊಣೆಯನ್ನು ಚುನಾವಣಾ ಆಯೋಗ, ಸಿಎಂ ಹಾಗೂ ಬಿಬಿಎಂಪಿ ಹೊರಬೇಕು, ಇದಲ್ಲದೇ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಅಂತ ಹೇಳಿದರು. ಕೂಡಲೇ ಬೊಮ್ಮಾಯಿ ಸಿಎಂ ಆದ್ಮೇಲೆ ಏನೆಲ್ಲ ಆಟ ಆಡಬೇಕೋ ಅದನ್ನು ಆಡುತ್ತಿದ್ದಾರೆ ಅಂತ ತಿಳಿಸಿದ್ದಾರೆ.ಬೊಮ್ಮಾಯಿಯವರನ್ನು ಕೂಡಲೇ ಬಂಧನ ಮಾಡಬೇಕು ಅಂತ ಅವರು ಒತ್ತಾಯಿಸಿದ್ದಾರೆ.