ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೆಲ ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ವರದಿ ಬಂದಿದ್ದು, ವರದಿಯಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ.

BREAKING NEWS : ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಬಾಲಕ ಸಾವು

ಈ ಕುರಿತು ನೀಡಿರುವ ಪ್ರಿಯಾಂಕ್ ಖರ್ಗೆ, ಕಳೆದ ಮೂರು ದಿನಗಳಿಂದ ನಾನು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಹಾಗೂ ಜನರನ್ನು, ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ಕ್ಷಮೆಯಿರಲಿ. ಕಳೆದ ಮೂರು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ನಿನ್ನೆ ಬಂದಿರುವ ವರದಿಯ ಅನುಸಾರ ಡೆಂಗ್ಯೂ ಸೋಂಕು ಪಾಸಿಟಿವ್ ಆಗಿದೆ, ಆದ್ದರಿಂದ ನಿರಂತರ ವೈದ್ಯಕೀಯ ಆರೈಕೆಯಲ್ಲಿದ್ದು, ಇನ್ನೂ ಕೆಲವು ದಿನಗಳ ಕಾಲ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ತಮ್ಮೆಲ್ಲರ ಸಹನೆ ಮತ್ತು ಸಹಕಾರ ಸದಾ ನನ್ನೊಂದಿಗಿರಲಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Share.
Exit mobile version