ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇಡಿ ವಿಚಾರಣೆ ಖಂಡಿಸಿ ಇಂದೂ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ.
ರಾಜ್ಯರಾಜಧಾನಿ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು, ಮಂಗಳೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಗಿದ್ದಾರೆ.
ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ. ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೈಸೂರಿನಲ್ಲಿ ಜಿ. ಪರಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಬಳಿಕ ಈಗ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
HEALTH TIPS : ಮೈ-ಕೈ ನೋವು ಹೋಗಲಾಡಿಸಲು ಸುಲಭವಾದ ಪರಿಹಾರಗಳಿವೆ..! ತಜ್ಞರ ಸಲಹೆ