ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಸಭೆ ಕರೆದಿದ್ದು, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಸಭೆ ಕರೆದಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಕೊರೊನಾ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುನ್ನೆಚ್ಚರಿಕೆವಹಿಸಬೇಕು.ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ ಪ್ರತ್ಯೇಕ ಗೈಡ್ ಲೈನ್ಸ್ ಬಿಡುಗಡೆ ಮಾಡುತ್ತೇವೆ. ಇಂದು ಸಂಜೆ ಅಥವಾ ನಾಳೆ ಗೈಡ್ ಲೈನ್ಸ್ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
BREAKING NEWS: ಚಾಲೆಂಜಿಂಗ್ ಸ್ಟಾರ್ ದರ್ಶನ ಮೇಲೆ ಚಪ್ಪಲಿ ಎಸೆದ ಪ್ರಕರಣ : ಮೂವರು ಅರೆಸ್ಟ್
ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ. ಬೆಂಗಳೂರಿ ನಗರಕ್ಕೆ ಪ್ರತ್ಯೇಕ ನಿಯಮ ಹಾಗೂ ಉಳಿದ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪ್ರಮುಖವಾಗಿ ಮುಂಬರುವ ಹೊಸ ವರ್ಷದ ಸ್ವಾಗತ ಕಾರ್ಯಕ್ರಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಯೋಜನೆ ಮತ್ತು ಸಂಭ್ರಮಾಚರಣೆಗೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಲಸಿಕೆ ಏರಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಲಿದೆ. ಬಳಿಕ ಹೊಸ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರು ಹಾಗೂ ಇತರೆ ಭಾಗಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯದ ಕೊರೊನಾ ಸಕ್ರಿಯ ಕೇಸ್ ನಲ್ಲಿ ಶೇ.99 ರಷ್ಟು ಬೆಂಗಳೂರಿನಲ್ಲಿವೆ. ಹೊಸ ವರ್ಷದ ದಿನ ಬೆಂಗಳೂರಿನೆಲ್ಲೆಡೆ ಸಂಭ್ರಮ ಜೋರಿರುತ್ತದೆ. ಹೀಗಾಗಿ ಮೆಟ್ರೋ, ಸಾರಿಗೆ ಬಸ್ ಗಳಲ್ಲಿ ಕಡ್ಡಾಯ ಲಸಿಕೆ ಪ್ರಮಾಣ ಪತ್ರ, ಮಾಸ್ಕ್ ಕಡ್ಡಾಯ ಒಳಗೊಂಡ ನಿಯಮಗಳನ್ನು ಜಾರಿಗೊಳಿಸಬಹುದು.