ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525348 ಕ್ಕೆ ಏರಿಕೆಯಾಗಿದೆ.

#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,815 ಹೊಸ ಪ್ರಕರಣಗಳು, 15,899 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 1,22,335

ದೈನಂದಿನ ಪಾಸಿಟಿವಿಟಿ ದರ 4.96%

Share.
Exit mobile version