ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳ ಜನರನ್ನು ಸೇರಿಸಲು ಬಿಜೆಪಿ ಯೋಜಿಸಿದ್ದು, ಸುಮಾರು 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನರನ್ನು ಕರೆ ತರಲು 5 ಸಾವಿರ ಬಸ್ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಮಾವೇಶವು ನಿರ್ವಿಘ್ನವಾಗಿ ನಡೆಯಲಿ ಎಂಬ ಉದ್ದೇಶದಿಂದ ಶುಕ್ರವಾರ ಬೆಳಗ್ಗೆ ವೇದಿಕೆ ಸ್ಥಳದಲ್ಲಿ ಗಣಪತಿ ಹೋಮ ಮಾಡಲಾಗಿದೆ.
BIGG NEWS : ಶೀಘ್ರದಲ್ಲೇ ಗೊರಗುಂಟೆಪಾಳ್ಯ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಲಾಗುವುದು : ಸಿಎಂ ಬೊಮ್ಮಾಯಿ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ಸಚಿವರು,ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.