ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ರಾಮನಗರದಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ದರ್ಪ : ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ವಾಪಸ್!
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಬಳಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ರವಿ ಉಕ್ಕುಂದ್ (45) ಹಾಗೂ ಪತ್ನಿ ಮಧುಮತಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಸಿಂದಗಿಯಿಂದ ಕಲಬುರಗಿ ನಗರಕ್ಕೆ ರವಿ ಉಕ್ಕುಂದ್ ಹಾಗೂ ಪತ್ನಿ ಮಧುಮತಿ ಹೊರಟಿದ್ದರು. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.