ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದೆ.
ಭಾರತ್ ಜೋಡೋ’ ಯಾತ್ರೆಗೆ ಕೆಜಿಎಫ್ ( KGF) ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್(FIR) ದಾಖಲಾಗಿತ್ತು.
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದ್ದು, ಸಂಸ್ಥೆಯು ದೂರು ದಾಖಲಿಸಿತ್ತು.
ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಕಾಂಗ್ರೆಸ್ ಯಾತ್ರೆಯಲ್ಲಿ ಬಳಸಿದೆ ಎಂಬ ಆರೋಪವಿದೆ.