ಬೆಂಗಳೂರು : ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲಕನೊಬ್ಬ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಾಲನೆ ಮಾಡಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲ ಆ್ಯಂಬುಲೆನ್ಸ್ ಚಾಲಕ ಸಂಜೀವ್ ಎಂಬಾತ 4 ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಸಾರ್ವಜನಿಕರು ಆ್ಯಂಬುಲೆನ್ಸ್ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ 10 ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.