ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.85ರಂತೆ ಲಾಭಾಂಶ ನೀಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಶಿವಮೊಗ್ಗ: ಸೆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ನಡವಳಿಗಳನ್ನು ಹೊರಡಿಸಿ ಆದೇಶಿಸಿದ್ದಾರೆ. ಈ ಆದೇಶದಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ 01-04-2016 ರಿಂದ 31-03-2018ಕ್ಕೆ ಅಂತ್ಯಗೊಂಡ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಿ, ಸರ್ಕಾರ ಮಂಜೂರಾತಿ ನೀಡಿದೆ ಎಂದಿದ್ದಾರೆ.
ಇನ್ನೂ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು ನಿರ್ವಹಿಸುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗ ಸಂಬಂಧಿಸಿದಂತೆ 2016-18ರ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯನ್ನು ಆಧರಿಸಿ, ಈ ಕೆಳಕಂಡಂತೆ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡಿದೆ.
BREAKING NEWS: ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು
ದಿನಾಂಕ 01-04-2016ರಿಂದ 31-03-2018ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.85ರಂತೆ ಲಾಭಾಂಶ ( Bonus ) ನೀಡಿ ಆದೇಶಿಸಲಾಗಿದೆ.
ಇದಲ್ಲದೇ ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ 01-04-2018 ರಿಂದ 31-03-2020ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.85ರಂತೆ ಮಧ್ಯಂತರ ಲಾಭಾಂಶವನ್ನು ( Interim Bonus ) ನೀಡಲಾಗಿದೆ ಎಂದಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
BREAKING NEWS: SC/ST ಮಕ್ಕಳಿಗೆ ವೇದ ಗಣಿತ, ಸುತ್ತೋಲೆ ವಾಪಸ್ಸು | Vedic Maths withdrawn