ನವದೆಹಲಿ : ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮತ್ತು ಸಚಿವ ಸತ್ಯೇಂದ್ರ ಜೈನ್ ಅವ್ರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸತ್ಯೇಂದ್ರ ಜೈನ್ ಅವ್ರ ಪತ್ನಿ ಪೂನಂ ಜೈನ್ಗೆ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಮಾಹಿತಿಯ ಪ್ರಕಾರ, ಮುಂದಿನ ವಾರ ದೆಹಲಿಯ ಇಡಿಯ ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಅದ್ರಂತೆ, ಸತ್ಯೇಂದರ್ ಜೈನ್ ಅವರ ನಿಕಟವರ್ತಿಗಳೆಂದು ಪರಿಗಣಿಸಲಾದ ಉದ್ಯಮಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರನ್ನ ಈ ಹಿಂದೆ ಇಡಿ ಬಂಧಿಸಿತ್ತು. ಇನ್ನು ಈ ಪ್ರಕರಣದಲ್ಲಿ ಇಬ್ಬರನ್ನೂ ಪ್ರಶ್ನಿಸಲಾಗುತ್ತಿದೆ.