ಬೆಂಗಳೂರು : ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಚಾಮರಾಜಪೇಟೆಯ ಮಾಜಿ ಕಾರ್ಪೋರೇಟರ್ ಪತಿ ಅಯೂಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಚಾಮರಾಜಪೇಟೆಯ ಟಿಪ್ಪುನಗರದ ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯೂಬ್ ಖಾನ್ ಅವರಿಗೆ, ಅಣ್ಣನ ಪುತ್ರನೇ ಚಾಕುವಿನಿಂದ ಇರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಅಣ್ಣನ ಮಗನೆ ಮಾಜಿ ಕಾರ್ಪೋರೇಟರ್ ಪತಿಗೆ ಚಾಕುವಿನಿಂದ ಇರಿದಿದ್ದರ ಹಿಂದೆ ಆಸ್ತಿ ವಿವಾದ ಕಾರಣ ಎನ್ನಲಾಗಿದೆ. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿರುವಂತ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.