ದಕ್ಷಿಣ ಕನ್ನಡ : ಇಂದು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧ್ವಜಾರೋಹಣದ ವೇಳೆ ಘೋರ ದುರಂತ ಸಂಭವಿಸಿದ್ದು, ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ ಮಾಡುವಾಗ ನಿವೃತ್ತ ಸೈನಿಕ ಗಂಗಾಧರ್ ಎಂಬುವರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
BIGG NEWS : ದೇವನಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್ ಧ್ವಜಾರೋಹಣ