ಹುಬ್ಬಳ್ಳಿ : ನಗರದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಮದ್ದಿನ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಫ್ಯಾಕ್ಟರಿಯಲ್ಲಿ 4-5 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತಿವಾಗಿದೆ.
ಹುಬ್ಬಳ್ಳಿ ಹೊರವಲಯದಲ್ಲಿರುವ ತಾರಿಹಾಳ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯಲ್ಲಿ ಈ ದುರ್ಘಟನೆ ನಡೆಸಿದ್ದು, 4-5 ಕಾರ್ಮಿಕರು ಸಿಲುಕಿರುವ ಶಂಕೆಯಿದೆ. ಇನ್ನು ಈ ದುರ್ಘಟನೆಯಲ್ಲಿ ಒಂದು ಬೈಕ್ ಭಸ್ಮವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದಾರೆ.