ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋ ದೇವಿ ಮಾತಾ ಭವನದ ಬಳಿ ಶುಕ್ರವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ನಂತರ, ಸ್ಥಳದಲ್ಲಿ ಕೋಲಾಹಲ ಉಂಟಾಗಿದೆ ಅಂತ ಸ್ಥಳೀ ಯ ಮಾಧ್ಯಮಗಳು ವರದಿ ಮಾಡಿದೆ.
ಬೆಂಕಿಯನ್ನು ನಂದಿಸಲು ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಯಾಣ ಸುಗಮವಾಗಿ ಸಾಗುತ್ತಿದೆ ಅಂತ ತಿಳಿದು ಬಂದಿದೆ.