ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಿಂದ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲೆಯ ಪ್ರವಾಸ ಸ್ಥಿತಿಗತಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಚಿವ ಸಿ.ಸಿ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಗೆ ಗೈರಾದ ಬಿಜೆಪಿ ಶಾಸಕ ಸಿದ್ದು ಸವದಿ ಗೋವಾದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾರೆ.
ಪುರಸಭೆ ಅಧ್ಯಕ್ಷರ ಚುನಾವಣೆಗಾಗಿ ರೆಸಾರ್ಟ್ ರಾಜಕಾರಣ ನಡೆಯುತ್ತಿದ್ದು, ಗೋವಾ, ದಾಂಡೇಲಿಯಲ್ಲಿ ಮುಖಂಡರು ಮೋಜು ಮಸ್ತಿ ಮಾಡಲಾಗ್ತಿದೆ. ಅದ್ರಂತೆ, ಬಾಗಲಕೋಟೆ ಜಿಲ್ಲೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ, ಇಂದು ಸದಸ್ಯರ ಜೊತೆಗೂಡಿ ಮೋಜು ಮಸ್ತಿ ಮಾಡುತ್ತಿದ್ದಾರೆ.
ಸಧ್ಯ ಬಿಜೆಪಿ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾಗ್ತಿದ್ದು, ಮೋಜಿನಲ್ಲಿ ತೊಡಗಿರುವ ಸಿದ್ದು ಸವದಿ ಫೋಟೋ ಹಾಕಿ ವ್ಯಂಗ್ಯ ಮಾಡುತ್ತಿದ್ದಾರೆ.
ಅಂದ್ಹಾಗೆ, ಈ ಹಿಂದೆ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಗಲಾಟೆ ಆಗಿದ್ದು, ಮಹಿಳಾ ಸದಸ್ಯರನ್ನ ಎಳೆದಾಡಿ ಸಿದ್ದು ಸವದಿ ಟೀಕೆಗೆ ಗುರಿಯಾಗಿದ್ದರು. ಈಗ ಮತ್ತೆ ಅಧ್ಯಕ್ಷರ ಆಯ್ಕೆಗಾಗಿ ಗೋವಾದಲ್ಲಿ ಮೋಜು ಮಸ್ತಿ ನಡೆಯುತ್ತಿದೆ.