ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BREAKING NEWS: ಕಲ್ಲಿದ್ದಲು ಹಗರಣ ಪ್ರಕರಣ: ಬಂಗಾಳದ ಕಾನೂನು ಸಚಿವ ʻಮೊಲೊಯ್ ಘಾಟಕ್ʼ ನಿವಾಸದ ಮೇಲೆ ಸಿಬಿಐ ದಾಳಿ
ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದು, ಉಮೇಶ್ ಕತ್ತಿಯವರ ಅಂತಿಮ ದರ್ಶನವನ್ನು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಕ್ಕೆ ತೆರಳಿ ಪಡೆದುಕೊಂಡರು. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ವರು ಅವರ ತಂದೆಗೂ ವಿಧಾನಸಭೆಯಲ್ಲಿ ಹೃದಯಘಾತವಾಗಿತ್ತು, ಮೂಲತಃ ಅವರು ರಾಮ ಹೆಗ್ಡೆಯವರ ಅನುಯಾಯಿಗಿದ್ದರು, ಅವರ ಜೊತೆಗಿನ ಒಡನಾಡವನ್ನು ನೆನಪಿಸಿಕೊಂಡು, ಮೃತರ ಆತ್ಮಕ್ಕೆ ಶಾಂತಿಕೋರಿದರು.
BIGG NEWS: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಕಂಬನಿ
ಇನ್ನು ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಬೇಕಿತ್ತು. ಆದರೆ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಬೆಳಗಾವಿಗೆ ಹೋರಟಿರುವ ಹಿನ್ನೆಲೆಯಲ್ಲಿ ಇಂದಿನ ಕನ್ಯಾಕುಮಾರಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇಂದು ಮಧ್ಯಾಹ್ನ ಸಿದ್ದರಾಮಯ್ಯ ಬೆಳಗಾವಿಗೆ ಪ್ರಯಾಣ ಬೆಳಸಲಿದ್ದಾರೆ.