ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದ್ರೆ, ಸಾಮಾನ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಇನ್ನು ಸೋನಿಯಾ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ.
ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಈ ಕಾರಣಕ್ಕಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ಮಂಗಳವಾರ ಸಂಜೆ ದೆಹಲಿಗೆ ಮರಳಿದರು.
JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಜ. 7 ರಂದು ಬೀದರ್ ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ
WATCH VIDEO: ಗೇಟ್ ತೆರೆಯದಿದ್ಕೆ ಟೋಲ್ ಪ್ಲಾಜಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಬಿಆರ್ಎಸ್ ಶಾಸಕ…. ವಿಡಿಯೋ ವೈರಲ್
ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು- ಸಚಿವ ಮುರುಗೇಶ್ ನಿರಾಣಿ ಒತ್ತಾಯ