ನವದೆಹಲಿ: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೋಗೆ ತೆರಳಲಿದ್ದಾರೆ. ಟೋಕಿಯೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ ಅಂತ ತಿಳಿದು ಬಂದಿದೆ.
ಜುಲೈ 10 ರಂದು ಹೌಸ್ ಆಫ್ ಕೌನ್ಸಿಲರ್ಸ್ ಚುನಾವಣೆಗೂ ಮುನ್ನ ಪಶ್ಚಿಮ ಜಪಾನ್ನಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದಾಗ ಜುಲೈ 8 ರಂದು ಜಪಾನಿನ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿ ಅಬೆ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪ್ರಧಾನಿ ಮೋದಿ ಅವರು ಅಬೆ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ತಮ್ಮ ಆತ್ಮೀಯ ಸ್ನೇಹಿತ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದ ಅವರು, ಜಪಾನಿನ ಮಾಜಿ ಪ್ರಧಾನಿ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ಕಂಬನಿ ಮಿಡಿದಿದ್ದರು.
ರಜೆಯ ಖುಷಿ ಕ್ಷಣ ಕಳೆಯಲು ಬಂದ ಮೂವರು ವಿದ್ಯಾರ್ಥಿಗಳ ‘ದುರಂತ ಅಂತ್ಯ’ : ಅಮಾವಾಸ್ಯೆ ದಿನವೇ ಉಡುಪಿಯಲ್ಲಿ ದುರ್ಘಟನೆ
ಸುಪ್ರೀಂ ಕೋರ್ಟ್ ಕಲಾಪಗಳ ನೇರಪ್ರಸಾರದ ಬಗ್ಗೆ ಮಾಹಿತಿ ನೀಡಿದ ಸಿಜೆಐ ಯು.ಯು.ಲಲಿತ್