ಬೆಳಗಾವಿ : ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ರಹತ್ಯೆ ಮಾತುಕತೆ ನಡೆಸಿದ್ದಾರೆ.
BREAKING NEWS: ವಿಧಾನಸಭೆ ಕಲಾಪ ಆರಂಭ; ಪ್ರಶ್ನೋತ್ತರ ಕಲಾಪದ ವೇಳೆ ಸಚಿವರ ಗೈರಿಗೆ ಸ್ಪೀಕರ್ ಆಕ್ಷೇಪ
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ರಮೆಶ್ ಜಾರಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ರಹಸ್ಯ ಮಾತುಕತೆ ನಡೆಸಿದ್ದಾರೆ. ಆದರೆ ಚರ್ಚೆ ಗುಟ್ಟು ಬಿಟ್ಟುಕೊಟ್ಟಿ. ಮಾತುಕತೆ ಬಳಿಕ ಇಬ್ಬರೂ ನಾಯಕರು ಸದನಕ್ಕೆ ಹಾಜರಾಗಿದ್ದಾರೆ.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನನ್ನನ್ನು ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಬಳಿ ಈಗಾಗಲೇ ಚರ್ಚೆ ನಡೆಸಲಾಗಿದೆ. ಮತ್ತೊಮ್ಮೆ ವರಿಷ್ಠರ ಭೇಟಿಯಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.