ಬೆಂಗಳೂರಿನಲ್ಲಿ : ಚುನಾವಣೆ ಹೊತ್ತಲ್ಲೇ ಜೆಡಿಎಸ್ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಶೀಘ್ರವೇ ಕಾಂಗ್ರೆಸ್ ಗೆ ಸೇರುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ರಾಜೀನಾಮೆ ನೀಡುತ್ತಿದ್ದು,ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದೆ.
ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತ ಅವರು ಡಿಸೆಂಬರ್ 15 ರ ನಾಳೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಡಿಸೆಂಬರ್ 17 ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
BIG NEWS: ʻಕತಾರ್ ಫಿಫಾ ಫೈನಲ್ ನನ್ನ ಕೊನೆಯ ವಿಶ್ವಕಪ್ ಪಂದ್ಯʼ: ʻಲಿಯೋನೆಲ್ ಮೆಸ್ಸಿʼ ಸ್ಪಷ್ಟನೆ | Lionel Messi