ಇಸ್ಲಾಮಾಬಾದ್: ಇತರ ರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನ ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನ ಸಾರ್ವಜನಿಕ ಹುದ್ದೆಯಿಂದ ಅನರ್ಹಗೊಳಿಸಿದೆ ಎಂದು ವರದಿಯಾಗದೆ. ಈ ಮೂಲಕ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಿದೆ.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಚುನಾವಣಾ ಆಯೋಗವು ಇಮ್ರಾನ್ ಖಾನ್ ಅವ್ರನ್ನ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಿದೆ. ಇನ್ನು ತೋಶಾ ಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಇಸಿಪಿ ತೀರ್ಪು ನೀಡಿದೆ. ಈ ಮೂಲಕ ಇಮ್ರಾನ್ ಖಾನ್ ಇನ್ನು ಮುಂದೆ ಸಂಸತ್ತಿನ ಸದಸ್ಯರಲ್ಲ ಎಂದು ಇಸಿಪಿ ಘೋಷಿಸಿದೆ. ಇಸಿಪಿಯ ನಿರ್ಧಾರದ ಪ್ರಕಾರ, ಭ್ರಷ್ಟಾಚಾರಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಕಾನೂನು ಕ್ರಮಗಳನ್ನ ಕೈಗೊಳ್ಳಲಾಗುವುದು.
Pakistan's election commission disqualified former Prime Minister Imran Khan from holding public office over charges of unlawfully selling state gifts received from heads of other nations & foreign dignitaries: Reuters reported citing local media pic.twitter.com/6zIUQYggjX
— ANI (@ANI) October 21, 2022