ರಾಯಚೂರು : ರಾಜ್ಯಾದ್ಯಂತ ಪಿಎಫ್ ಐ ಮುಖಂಡರಿಗೆ ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದು, ರಾಜ್ಯದ ಹಲವೆಡೆ 40 ಕ್ಕೂ ಹೆಚ್ಚು ಪಿಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರಿನಲ್ಲಿ PFI ಮಾಜಿ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ಬಂಧಿಸಲಾಗಿದ್ದು ತಹಶೀಲ್ದಾರ್ ಎದುರು ಹಾಜರುಪಡಿಸಿ ಕಾನೂನು ಪ್ರಕ್ರಿಯೆ ನಡೆಸಲಾಗುತ್ತೆ. ಸದ್ಯ ಮೊಹಮ್ಮದ್ ಇಸ್ಮಾಯಿಲ್ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ.
ರಾಜ್ಯದ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.