ಕಲಬುರಗಿ : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ ಸೇರಿದಂತೆ ಪೊಲೀಸರ ಮೇಲೆ 40 ಜನರಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ತರೂರಿ ಸಮೀಪದ ವಾಡಿ ಹಾಗೂ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಬಸವಕಲ್ಯಾಣ ತಾಲೂಕಿನ ಹೊನ್ನಾಳಿಯ ಜಮೀನಿನಲ್ಲಿ ನಡೆದಿದೆ.
ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಮೇಲೆ 40 ಜನ ದುಷ್ಕರ್ಮಿಗಳ ಹಲ್ಲೆ ಮಾಡಿದ್ದು, ಘಟನೆಯಲ್ಲಿ ಸಿಪಿಐ ಶ್ರೀಮಂತ ಇಲ್ಲಾಳ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಶ್ರೀಮಂತ ಇಲ್ಲಾಳ ಅವರನ್ನು ಬಸವಕಲ್ಯಾಣ ಆಸ್ಪತ್ರೆಯಲ್ಇ ಚಿಕಿತ್ಸೆ ನೀಡಿ ತಡರಾತ್ರಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.