ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರ ಧರಣಿಗೆ ಕೊನೆಗೂ ಸರ್ಕಾರ ಮಣಿದಿದ್ದು, ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ಹಿಂಪಡೆದಿದ್ದಾರೆ.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.
ಅಂದ್ಹಾಗೆ, ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಹಲವು ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಕೆಲ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಧರಣಿ ವಾಪಸ್ ಪಡೆದಿದ್ದಾರೆ.