ಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
WATCH VIDEO: ಬ್ಯಾಂಕ್ಗೆ 10 ಅಡಿ ಉದ್ದದ ಸುರಂಗ ಕೊರೆದು 1 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಖದೀಮರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಮುಂಜಾಗ್ರತ ಕ್ರಮವಾಗಿ ಬೂಸ್ಟರ್ ಡೋಸ್ ಹಾಕಿಕೊಳ್ಳುವಂತೆ ಜನರಿಗೆ ಮನವಿ ಮಾಡಲಾಗಿದೆ ಎಂದರು.
BIGG NEWS: ಬಳ್ಳಾರಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪ; ಇಂಗ್ಲೀಷ್ ಪ್ರೊಫೆಸರ್ ಅಮಾನತು ಮಾಡಲು ಆದೇಶ
ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಕೋವಿಡ್ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಹೊಸ ವರ್ಷಕ್ಕೆ ಗೈಡ್ ಲೈನ್ ಜಾರಿಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸುಧಾಕರ್ ಮಾಹಿತಿ ನೀಡುತ್ತಾರೆ. ಆಕ್ಸಿಜನ್ ಸೇರಿ ಅಗತ್ಯ ಸೇವೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕೋವಿಡ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ.ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
BREAKING NEWS : ಹೊಸವರ್ಷಾಚರಣೆಗೆ ಮಾಸ್ಕ್ ಕಡ್ಡಾಯ ವಿಚಾರ : ಆರೋಗ್ಯ ಸಚಿವ ಡಾ.ಸುಧಾಕರ್ ಮಹತ್ವದ ಹೇಳಿಕೆ