ಬೆಂಗಳೂರು : ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 153 ಕ್ಷೇತ್ರಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
BIGG NEWS : ಗುಜರಾತ್ ನಲ್ಲಿ ಬಿಜೆಪಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 153-154 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಗುಜರಾತ್ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಎದ್ದುಕಾಣುತ್ತಿದೆ ಎಂದು ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ರಾಜ್ಯ ಬಿಜೆಪಿ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಮೂಡಿಸಿದೆ. ಕರ್ನಾಟಕದಲ್ಲಿ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಸರ್ಕಾರ ರಚನೆ ಮಾಡಲಿದೆ ಎಂದು ತಿಳಿಸಿದ್ದಾರೆ.