ಹಾಸನ : ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಮಾಜಿ ಸಿಚವ ಹೆಚ್.ಡಿ. ರೇವಣ್ಣ ತೆರೆ ಎಳೆದಿದ್ದು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರ ತೀರ್ಮಾನವೇ ಅಂತಿಮವಾಗಿದೆ. ನಾನೊಬ್ಬನೇ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ಟಿಕೆಟ್ ವಿಚಾರದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
BREAKING NEWS : ಬೆಳಗಾವಿಗೆ ಏರ್ ಪೋರ್ಟ್ ಗೆ ಆಗಮಿಸಿದ ವಿಂಗ್ ಕಮಾಂಡರ್ ಹನುಮಂತರಾವ್ ಪಾರ್ಥಿವ ಶರೀರ