ಬೆಂಗಳೂರು : ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಎಸಿಬಿ ರಚನೆ ಆದೇಶ ರದ್ದು ಪಡಿಸಿದೆ. ಇನ್ನು ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ.
ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿದ ಹೈಕೋರ್ಟ್, ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ.
ನ್ಯಾ.ಬಿ. ವೀರಪ್ಪ, ನ್ಯಾ.ಕೆ.ಎಸ್ ಹೇಮಲೇಖಾರವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ಲೋಕಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂದಿದೆ. ಇನ್ನು ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಯುಕ್ತ, ಉಪಲೋಕಯುಕ್ತ ನೇಮಕವಾಗಬಾರದು. ಇನ್ನು ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಲಾಗಿದೆ.